ಹೆಚ್.ಡಿ.ಕೋಟೆ: ತಾಲ್ಲೂಕಿನ ಆಡಳಿತ ಸೌಧದ ಸಾರ್ವಜನಿಕ ಶೌಚಾಲಯಗಳು ಗಬ್ಬೆದ್ದು ನಾರುತಿದ್ದು, ಸ್ವಚ್ಛಗೊಳಿಸುವಲ್ಲಿ ತಾಲ್ಲೂಕು ಆಡಳಿತ ವಿಫಲವಾಗಿದೆ. ಆಡಳಿತ ಸೌಧದ ದುಸ್ಥಿತಿ ನೋಡಲಾಗದೇ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೇ ಸಂದರ್ಭದಲ್ಲಿ ಹೋರಾಟಗಾರ, ದಲಿತ ಸಂಘರ್ಷ ಸಮಿತಿಯ ಮುಖಂಡ ಸಣ್ಣಕುಮಾರ್ ಮತ್ತು ದಲಿತ ಸಂಘರ್ಷ ಸಮಿತಿಯ ಹೋರಾಟಗಾರರು ಶೌಚಾಲಯ ಸ್ವಚ್ಛಗೊಳಿಸಿ, ವಿನೂತನವಾಗಿ ಪ್ರತಿಭಟನೆ ತೋರಿದ್ದಾರೆ.
ಶಾಸಕರು ತಿಂಗಳಿಗೆ ಎರಡೂ ಮೂರು ಬಾರಿ ತಾಲ್ಲೂಕು ಕಛೇರಿಗೆ ಭೇಟಿ ನೀಡುತ್ತಿರುತ್ತಾರೆ. ಆದರೆ ತಾಲ್ಲೂಕು ಆಡಳಿತದ ಅವ್ಯವಸ್ಥೆ ಅವರ ಕಣ್ಣಿಗೆ ಕಾಣುತಿಲ್ಲವೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಇನ್ನೂ ತಾಲೂಕು ಆಡಳಿತ ಸೌಧವೇ ಈ ದುಸ್ಥಿತಿಯಲ್ಲಿರುವುದು ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆಗಳಿಗೆ ಕಾರಣವಾಗಿದೆ. ಜೊತೆಗೆ ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ ಬಿಸಿ ಮುಟ್ಟಿಸಬೇಕಾದ ಶಾಸಕರು ಯಾಕೆ ಮೌನವಾಗಿದ್ದಾರೆ ಅನ್ನೋ ಪ್ರಶ್ನೆಗಳಿಗೆ ಕಾರಣವಾಗಿದೆ.
ಶೌಚಾಲಯ ಸ್ವಚ್ಛಗೊಳಿಸುವುದಕ್ಕೆ ವಿಳಂಬ ಮಾಡುತ್ತಿರುವ ತಾಲೂಕು ಆಡಳಿತ ಜನರ ಗೋಳನ್ನು ಬಗೆ ಹರಿಸುತ್ತಾರಾ ಎಂದು ಕಾದು ನೋಡಬೇಕಿದೆ. ಸಾರ್ವಜನಿಕರ ಶೌಚಾಲಯವನ್ನೂ ನಿರ್ವಹಣೆ ಮಾಡದ ಅಧಿಕಾರಿಗಳು ಜನರ ಬೇರೆ ಸಮಸ್ಯೆಗಳಿಗೆ ಸ್ಪಂದಿತ್ತಾರೆಯೇ ಅನ್ನೋ ಮಾತುಗಳು ಕೇಳಿ ಬಂದಿವೆ.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


