ಬೆಂಗಳೂರು ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾದ ಅಮಾನವೀಯ ಘಟನೆ ಬೆಂಗಳೂರಿನ ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಡೆದಿದೆ. ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಮೃತಪಟ್ಟಿದ್ದಾಳೆ.
ಶಿಕ್ಷಕನ ಹೊಡೆತಕ್ಕೆ ಮೊದಲ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಇನ್ನೂ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


