ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ರೂ. ಹೆಚ್ಚಲ್ಲ ಅಲ್ಲವೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಫೋಟೋ ಹಾಕಿ ಕರೆನ್ಸಿ ನೋಟೊಂದನ್ನು ರಾಜ್ಯ ಕಾಂಗ್ರೆಸ್ ಸಿದ್ದಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
ಶಾಸಕ ಸಂಗಮೇಶ್ಗೆ 500 ಕೋಟಿ ರೂ. ಆಫರ್ ನೀಡಿದ್ದೇನೆ ಎಂಬ ಈಶ್ವರಪ್ಪ ಅವರ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಈ ರೀತಿಯಾಗಿ ವ್ಯಂಗ ಮಾಡಿದೆ.
ಈಶ್ವರಪ್ಪ ಅವರೇ, ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು ಆಪರೇಷನ್ ಕಮಲದ 500 ಕೋಟಿ ಎಣಿಸುವುದಕ್ಕಾ, 40% ಕಮಿಷನ್ ಲೂಟಿಯ ಹಣ ಎಣಿಸುವುದಕ್ಕಾ? 500 ಕೋಟಿ ಹೂಡಿಕೆ ಹಿಂತೆಗೆಯಲೆಂದೇ ಸಂತೋಷ್ ಪಾಟೀಲ್ ಜೀವ ತೆಗೆದಿರಾ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


