ಬೆಳಗಾವಿ: ರಾಮದುರ್ಗ ತಾಲೂಕಿನ ಮುದೇನೂರಿನಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ ಕೇಸ್ಗೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.
ವಾಂತಿ ಭೇದಿ ತೀವ್ರವಾಗಿ ಕಿಡ್ನಿ ವೈಫಲ್ಯವಾಗಿದ್ದು, ಚಿಕಿತ್ಸೆ ಫಲಿಸದೆ ಮುದೇನೂರು ಗ್ರಾಮದ ವಿಠ್ಠಲ ಗುಡಿಹಿಂದ (45) ಮೃತಪಟ್ಟಿದ್ದಾರೆ. ಪ್ರಕರಣವಾದಾಗಿಂದ ಬಾಗಲಕೋಟೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಠ್ಠಲ, ಜಿಲ್ಲಾಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಆಂಬುಲೆನ್ಸ್ನಲ್ಲಿ ಮೃತಪಟ್ಟಿದ್ದಾರೆ.
ಸದ್ಯ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆಯ 3ಕ್ಕೆ ಏರಿದೆ. ಗ್ರಾಮದ 186 ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ 12 ಬಾಲಕರು, 8 ಬಾಲಕಿಯರು ಸೇರಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿರುವ 94 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


