ಬೆಳಗಾವಿ: ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪಯಾತ್ರೆ ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ.
ಇನ್ನು ಎರಡನೇ ಹಂತದ ಜನ ಸಂಪರ್ಕ ಸಭೆ ಬೆಳಗಾವಿ ಜಿಲ್ಲೆಯಲ್ಲಿ 9ರಂದು ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ. ರಾಯಭಾಗಕ್ಕೆ ತೆರಳಿ ಅಲ್ಲಿ ಜನ ಸಂಪರ್ಕ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
ಸಂಜೆ ಖಾನಾಪುರ ಪಟ್ಟಣದಲ್ಲಿ ಸಭೆ ನಡೆಯಲಿದ್ದು ಬಿಜೆಪಿ ನಾಯಕರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಒಂದೇ ದಿನ ಮೂರು ಕಡೆ ಸಭೆ ಮಾಡುವುದರ ಮೂಲಕ ಜಿಲ್ಲೆಯ ಬಿಜೆಪಿ ಕಾರ್ಯಕರ್ತರನ್ನ ಒಗ್ಗೂಡಿಸಿ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸಂದೇಶ ನೀಡಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


