ಚಿಕ್ಕೋಡಿ : ಹಿಂದೂ ಎಂಬ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಹಿಂದೂ ಎಂಬ ಪದ ಪರ್ಷಿಯನ್ ಪದವಾಗಿದ್ದು, ಭಾರತೀಯ ಪದವೇ ಅಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಎನ್ನುವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು,
ಭಾರತಕ್ಕೂ, ಪರ್ಷಿಯನ್ ಗೂ ಏನೂ ಸಂಬಂಧವಿಲ್ಲದಿದ್ದರೂ, ಹಿಂದೂ ಪದ ನಮ್ಮದು ಹೇಗಾಯಿತು ಎಂಬುವುದರ ಬಗ್ಗೆ ಚರ್ಚೆ ನಡೆಯಬೇಕಿದೆ. ಹಿಂದೂ ಪದದ ಅರ್ಥ ಅಶ್ಲೀಲವಾಗಿದ್ದು, ನಿಜಾರ್ಥ ತಿಳಿದರೆ ನಾಚಿಕೆ ಆಗುತ್ತದೆ ಎಂದು ವಿವಾದಾತ್ಮಕವಾಗಿ ಮಾತನಾಡಿದ್ದಾರೆ.
ಎಲ್ಲಿಂದಲೋ ಬಂದಿರುವ ಹಿಂದೂ ಧರ್ಮವನ್ನು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದ ಎಂದು ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಹಿಂದೂ ಪದ ಪರ್ಶಿಯನ್ ಮೂಲದಿಂದ ಬಂದಿದೆ ಎಂದು ಹೇಳುತ್ತಿದ್ದಂತೆ ಹಲವರು ವಿರೋಧಿಸಿದ್ದಾರೆ. ಜಾರಕಿಹೊಳಿ ಆಡಿರುವ ಮಾತುಗಳು ಇದೀಗ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


