ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಂತೋಷ್ (28) ಎಂಬಾತ ಈ ಕೃತ್ಯ ಎಸಗಿದ್ದು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿಕೊಂಡು ಬಂದ ವೃದ್ದೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ, ವೃದ್ದೆಯನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


