ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಬದಲಾವಣೆ ಮಾಡಲಾಗಿದ್ದು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಸಹ ಅಧಿಸೂಚನೆ ಪ್ರಕಟಿಸಿದೆ.
ಮಂಡಳಿ ನಿರ್ದೇಶಕರು ಹೆಚ್. ಎನ್. ಗೋಪಾಲಕೃಷ್ಣ ಈ ಕುರಿತು ಆದೇಶವನ್ನು ಹೊರಡಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಬದಲಾವಣೆ ಮಾಡಲಾಗಿದೆ, ಕಡತ, ಮೊಹರು, ಪತ್ರ ವ್ಯವಹಾರದಲ್ಲಿಯೂ ಹೊಸ ಹೆಸರು ಬಳಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


