ಬೆಳಗಾವಿ : 2022-23 ನೇ ಸಾಲಿಗೆ ಇಲಾಖೆಯಿಂದ ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಯೋಜನೆಯಡಿ ಮೆಟ್ರಿಕ್ ಪೂರ್ವ (ಪ್ರೀಮ್ಯಾಟ್ರಿಕ್) ವಿದ್ಯಾರ್ಥಿ ವೇತನಕ್ಕಾಗಿ ಎಸ್.ಎಸ್.ಪಿ. ತಂತ್ರಾಂಶದಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಶಾಲೆ/ ಶಿಕ್ಷಣ ಸಂಸ್ಥೆಗಳ ಮುಖಾಂತರ ಸದರಿ ಯೋಜನೆಯ Website: https:/ssp.karnataka.gov.inರಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕಾರಣ ಬೆಳಗಾವಿ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನರು ಈ ಸೌಲಭ್ಯವನ್ನು ಪಡೆದು ಉನ್ನತ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


