ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಐಎಬಿಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿದ್ದು, ಸಮಾವೇಶದಲ್ಲಿ 4 ರಿಂದ 5ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.
ನ.11 ರಂದು ಸಮಾವೇಶ ನಡೆಯುವ ಸ್ಥಳದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದರು. ಡಿಸಿಪಿ ಅನೂಪ್ ಶೆಟ್ಟಿ, ಬೆಂಗಳೂರುನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸಾಥ್ ನೀಡಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ನ.11ರಂದು ಮೋದಿ ಪ್ರವಾಸ ಹಿನ್ನೆಲೆ ಎಲ್ಲಾ ವ್ಯವಸ್ಥೆ ಪರಿಶೀಲನೆ ನಡೆಸಿದ್ದೇನೆ. ಪ್ರಧಾನಿ ಮೋದಿ ಕೆಂಪೇಗೌಢ ಪ್ರತಿಮೆ ಉದ್ಘಾಟಿಸಲಿದ್ದಾರೆ. ಸಮಾವೇಶಕ್ಕೆ 4ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ. ಇದೆ. ಟ್ರಾಫಿಕ್ ಸೇರಿ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ. ಭದ್ರತೆಗೆ 4 ಸಾವಿರಕ್ಕೂ ಹೆಚ್ಚು ಪೊಲೀಸರು ನಿಯೋಜನೆ ಮಾಡುತ್ತೇವೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


