ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ, ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಅವರು, , ಲೆಫ್ಟಿನೆಂಟ್ ಗರ್ವನರ್ ಗೆ ಪತ್ರ ಬರೆದಿದ್ದಾರೆ.
ಈ ಕುರಿತು ಸುಕೇಶ್ ಚಂದ್ರಶೇಖರ್ ಪರ ವಕೀಲರು ಮಾಹಿತಿ ನೀಡಿದ್ದು, ವಂಚನೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿ ತನಿಖೆ ನಡೆಸಲು ಸುಕೇಶ್ ಒತ್ತಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈ ಮೊದಲು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಬರೆದಿದ್ದ ಪತ್ರ ಮಾಧ್ಯಮಗಳಲ್ಲಿ ಸೋರಿಕೆಯಾದ ಬಳಿಕ ದೆಹಲಿಯ ಮಾಂಡೊಲಿ ಜೈಲಿನಲ್ಲಿರುವ ತಮಗೆ ಬಹಳಷ್ಟು ಬೆದರಿಕೆ ಬಂದಿದೆ. ಎಎಪಿ ನಾಯಕ ಸತ್ಯೇಂದರ್ ಜೈನ್ ಅವರು ಜೈಲು ಅಧಿಕಾರಿಗಳ ಮೂಲಕ ಬೆದರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz