ಕೂದಲು ಉದುರುವ (hair loss) ಸಮಸ್ಯೆಯಿಂದ ನೊಂದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.
ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ.
ವೆಹಿಕಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್‍ಗೆ ಹುಬ್ಬು ಸೇರಿದಂತೆ ತಲೆಕೂದಲು ಉದುರುತ್ತಿತ್ತು. ಇದರಿಂದಾಗಿ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಿದರೂ ತಲೆ ಕೂದಲು ಉದುರುವುದು ನಿಂತಿರಲಿಲ್ಲ.
ಕೂದಲು ಇಲ್ಲ ಎಂದು ಅನೇಕರು ಆತನನ್ನು ಮದುವೆಯಾಗಲು ಯುವತಿಯರು ನಿರಾಕರಿಸುತ್ತಿದ್ದರು. ಇದರಿಂದ ನೊಂದ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದು, ಕೂದಲು ಉದುರುವ ಸಮಸ್ಯೆಯಿಂದ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಕೂದಲು ಉದುರುವ ಸಮಸ್ಯೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ.
ಘಟನೆಗೆ ಸಂಬಂಧಿಸಿ ಪ್ರಶಾಂತ್ ಕುಟುಂಬಸ್ಥರು ವೈದ್ಯರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


