ದೇಶದಲ್ಲಿ ಆರ್ಥಿಕ ಬದಲಾವಣೆ ತಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶ ಋಣಿ ಆಗಿರಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.
ಟಿಐಒಎಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ನೀತಿಗಳನ್ನು ರೂಪಿಸುವ ಮೂಲಕ ಮನಮೋಹನ್ ಸಿಂಗ್ ಬಡವರಿಗೂ ಸರಕಾರದ ಯೋಜನೆಗಳು ತಲುಪುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
1991ರಲ್ಲಿ ಮನಮೋಹನ್ ಸಿಂಗ್ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಆರ್ಥಿಕ ಪುನಶ್ಚೇತನ ನೀತಿ ಜಾರಿಗೆ ಬಂದಿತು. ಈ ಮೂಲಕ ದೇಶದಲ್ಲಿ ಆರ್ಥಿಕ ಉದಾರೀಕರಣದ ಹೊಸ ಅಧ್ಯಾಯ ಆರಂಭವಾಯಿತು ಎಂದು ಅವರು ಹೇಳಿದರು.
ಮನಮೋಹನ್ ಸಿಂಗ್ ಹೊಸ ಆರ್ಥಿಕ ಉದಾರೀಕರಣ ಜಾರಿಗೆ ತಂದಿದ್ದರಿಂದ ನಾನು ಮಹಾರಾಷ್ಟ್ರದಲ್ಲಿ ಸಚಿವನಾಗಿದ್ದಾಗ ರಸ್ತೆಗಳನ್ನು ರೂಪಿಸಲು ಸಾಧ್ಯವಾಯಿತು. ಅಲ್ಲದೇ ಆರ್ಥಿಕ ಉದಾರೀಕರಣದಿಂದ ಹೆಚ್ಚು ಪ್ರಯೋಜನವಾಗಿದ್ದು ಬಡವರಿಗೆ ಮತ್ತು ರೈತರಿಗೆ ಎಂದು ಗಡ್ಕರಿ ವಿವರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy