ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕ್ಷಮೆಯಾಚಿಸುವಂತೆ ಆಗ್ರಹಿಸಿ ರಾಜ್ಯದೆಲ್ಲೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ.
ಬೆಂಗಳೂರು, ಮೈಸೂರು, ಉಡುಪಿ ಸೇರಿದಂತೆ ರಾಜ್ಯಾದ್ಯಂತೆ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ಭುಗಿಲೆದಿದ್ದು ತಮ್ಮ ಹೇಳಿಕೆಯನ್ನ ಹಿಂಪಡೆದು ಕ್ಷಮೆಯಾಚಿಸುವಂತೆ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಸತೀಶ್ ಜಾರಕಿಹೊಳಿ ಪ್ರತಿಕೃತಿ ದಹಿಸಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಳಗಾವಿಯಲ್ಲಿ ಸಾಹಿತ್ಯಭವನದ ಮುಂದೆ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ ಸತೀಶ್ ಜಾರಕಿಹೊಳಿ ಕ್ಷಮೆಯಾಚಿಸುವಂತೆ ಆಗ್ರಹಿಸಿದರು. ಹಾಗೆಯೇ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ, ಉಡುಪಿ ಕಾರವಾರದಲ್ಲೂ ಸತೀಶ್ ಜಾರಕಿಹೊಳಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಪ್ರತಿಭಟನೆ ನಡೆಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy