ಬೆಳಗಾವಿ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾರರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಜಿಲ್ಲಾಧಿಕಾರಿ ಆವರಣದಲ್ಲಿ ಬುಧವಾರ (ನ.9) ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್. ಹೆಚ್.ವಿ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಆರಂಭಗೊಂಡ ಜಾಗೃತಿ ಜಾಥಾ ಚನ್ನಮ್ಮ ವೃತ್ತದ ಮಾರ್ಗವಾಗಿ ಸಂಚರಿಸಿ, ಬೋಗಾರ್ವಿಸ್ ಸರ್ಕಲ್ ವರೆಗೆ ತಲುಪಿತು. ಸರ್ದಾರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಸರ್ದಾರ್ ಶಿಕ್ಷಣ ಸಂಸ್ಥೆಯ ಪ್ರಶಿಕ್ಷಣಾರ್ಥಿಗಳು, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಈ ಸಂಧರ್ಬದಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪರುಶರಾಮ ದುಡಗುಂಟಿ, ಬೆಳಗಾವಿ ಶಿಕ್ಷಣಾಧಿಕಾರಿ ರವಿ ಭಜಂತ್ರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ. ಎಂ ಕಾಂಬಳೆ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


