ದೇವರ ಹರಕೆ ತೀರಿಸಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ ಮೂವರು ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಂಭವಿಸಿದೆ.
ಗೋಗಿ ತಾಂಡ ನಿವಾಸಿಗಳಾದ ದೀಪಕ್ (45), ಯುವರಾಜ್ (17) ಮತ್ತು ರಾಹುಲ್ (17) ಮೃತಪಟ್ಟ ದುರ್ದೈವಿಗಳು.
ಗೋಗಿ ತಾಂಡಾದಿಂದ ಸಾವಳಗಿ ತಾಂಡಗೆ ದೇವರಿಗೆ ಹರಕೆ ತೀರಿಸಲು ಕುಟುಂಬ ಸಮೇತರಾಗಿ ತೆರಳಿದ್ದರು. ಕುಟುಂಬದವರು ಬೇರೆ ವಾಹನದಲ್ಲಿ ಮರಳಿದರೆ, ಈ ಮೂವರು ಬೈಕ್ ನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಶವಗಳನ್ನು ಸಾಗಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


