ನಾಳೆ 108 ಅಡಿಯ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಿದ್ದು, ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿವೆ.
ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿಯವರು ಆಗಮಿಸುತ್ತಿದ್ದಾರೆ. ಮೋದಿ ಆಗಮನ ಹಿನ್ನೆಲೆ ಬೆಂಗಳೂರು ರಸ್ತೆ ಸಂಚಾರದಲ್ಲಿ ಮಾರ್ಗ ಬದಲಾವಣೆಯಾಗಲಿದ್ದು, ಟ್ರಾಫಿಕ್ ಹಾಗೂ ಭದ್ರತಾ ದೃಷ್ಟಿಯಿಂದ ನಾಳೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಕೆಲ ರಸ್ತೆಗಳು ಬಂದ್ ಆಗಲಿವೆ.
CTO ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ, ಸ್ಯಾಂಕಿ ರಸ್ತೆ, ಏರ್ಪೋರ್ಟ್ ಕಾರಿಡಾರ್, ಮಹಾರಾಣಿ ಬ್ರಿಡ್ಜ್ ಸೇರಿದಂತೆ ಕೆಲ ರಸ್ತೆಗಳು ಬಂದ್ ಆಗಲಿವೆ. ಮೋದಿ ಭದ್ರತೆಗಾಗಿ ಒಟ್ಟು 4 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


