ಬೆಂಗಳೂರು : ಶಾಲಾ ಮಕ್ಕಳಿಗೆ ದಿನಕ್ಕೆ ಮೂರು ಬಾರಿ 10 ನಿಮಿಷ ವಿರಾಮ ನೀಡುವ ವಾಟರ್ ಬೆಲ್ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಬೆಲ್ ಹೊಡೆದ ವೇಳೆ ಮಕ್ಕಳಿಗೆ ನೀರು ಕುಡಿಯಲು ಸೂಚಿಸಿಬೇಕೆಂಬುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಶುದ್ದವಾದ ಕುಡಿಯುವ ನೀರನ್ನು ಮಕ್ಕಳಿಗೆ ನೀಡಬೇಕು, ಕುಡಿಯುವ ನೀರಿನ ಬೆಲ್ ಗೆ ವಿಶೇಷ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಲಾಗಿದೆ.
ಬೆಳಗ್ಗೆ 10:35 ಕ್ಕೆ ಹಾಗೂ ಮಧ್ಯಾಹ್ನ 12 ಗಂಟೆ, ಹಾಗೂ 2 ಗಂಟೆಗೆ ವಾಟಲ್ ಬೆಲ್ ಮಾಡಲು ಚಿಂತನೆ ನಡೆಸಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ನೀರು ಬಹಳ ಮುಖ್ಯವಾಗಿದ್ದು, ಆದ್ದರಿಂದ ಮಕ್ಕಳಿಗೆ ನೀರು ಕುಡಿಯಲು ದಿನಕ್ಕೆ ಮೂರು ಬಾರಿ 10 ನಿಮಿಷ ಬ್ರೇಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಶಾಲೆಗಳಲ್ಲಿ ಮಕ್ಕಳು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುತ್ತಿಲ್ಲ ಎಂಬುದನ್ನು ಮನಗಂಡ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಎಲ್ಲ ಶಾಲೆಗಳಲ್ಲಿಯೂ ಕೇರಳ ಮಾದರಿಯಲ್ಲಿ ವಾಟರ್ ಬೆಲ್ ಯೋಜನೆ ಮರು ಜಾರಿಗೊಳಿಸುವ ಕುರಿತು ಚಿಂತನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


