ವಿಜಯಪುರ: ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿ ಚಲಿಸುತ್ತಿದ್ದ ತಂದೆ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ರಸ್ತೆಯಲ್ಲಿ ನಡೆದಿದೆ.
ರಮೇಶ ನಾಟಿಕಕಾರ(45) ಮಗಳು ಖುಷಿ(8) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಶ್ರೀದೇವಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಬಸವನ ಬಾಗೇವಾಡಿ ತಾಲೂಕಿನವರು ಎಂದು ತಿಳಿದು ಬಂದಿದೆ.
ಬಾಗೇವಾಡಿ ಮೂಲಕ ಪತಿ, ಪತ್ನಿ ಹಾಗೂ ಮಗಳು ಬೈಕ್ನಲ್ಲಿ ಚಲಿಸುತ್ತಿದ್ದಾಗ ಎದುರಿಗೆ ಬಂದ ಕ್ರೂಸರ್ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


