ಬೆಂಗಳೂರು : ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ತವ್ಯದ ಮೇಲಿದ್ದಾಗ ಮೃತಪಟ್ಟಲ್ಲಿ ಮೃತರ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ರೂ.20.00 ಲಕ್ಷಗಳನ್ನು ವಿಮಾ ಕಂಪನಿಯ ಮೂಲಕ ಪಡೆಯಲು ರಾಜ್ಯ ಸರ್ಕಾರ ಮಂಜೂರಾತಿ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಒಟ್ಟು 93,013 ಅಧಿಕಾರಿ ಮತ್ತು ಸಿಬ್ಬಂದಿಗಳು ಕರ್ತವ್ಯದ ಮೇಲಿರುವಾಗ ಆಕಸ್ಮಿಕ/ಅಪಘಾತದಲ್ಲಿ ಮೃತಪಟ್ಟಲ್ಲಿ ಮೃತರ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ರೂ.20.00 ಲಕ್ಷಗಳನ್ನು ವಿಮಾ ಕಂಪನಿಯ ಮೂಲಕ ಪಡೆಯಲು ಮಂಜೂರಾತಿ ಆದೇಶ ಹೊರಡಿಸಿದೆ.
ಅಧಿಕಾರಿಗಳು ಮೃತರ ಕುಟುಂಬದವರಿಗೆ ವಿಮಾ ಪರಿಹಾರ ಮೊತ್ತ ರೂ.20.00 ಲಕ್ಷಗಳನ್ನು ಮಂಜೂರು ಮಾಡುವ ಸಂಬಂಧ, ವಿವರವಾದ ವರದಿಯೊಂದಿಗೆ 15 ದಿನಗಳ ಒಳಗೆ ಕೈಂ ಫಾರಂ ಅನ್ನು ಭರ್ತಿ ಮಾಡಿ, ಸೂಚಿಸಿರುವ ದಾಖಲೆಗಳನ್ನು ಘಟಕಾಧಿಕಾರಿಗಳೇ ಖುದ್ದು ದೃಢೀಕರಿಸಿ ನೇರವಾಗಿ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಗೆ ಪೋಸ್ಟ್ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಲು ಸೂಚಿಸಲಾಗಿದೆ.
ಕರ್ತವ್ಯದ ಮೇಲಿರುವಾಗ ಮೃತಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಯ ಮಾಹಿತಿಯನ್ನು ನಿಗಧಿತ ಸಮಯದೊಳಗೆ ವಿಮಾ ಕಂಪನಿಗೆ ಕಳುಹಿಸುವುದು ಕಡ್ಡಾಯವಾಗಿರುತ್ತದೆ. ವಿಮಾ ಕಂಪನಿಗೆ ದಾಖಲೆಗಳನ್ನು ಸಲ್ಲಿಸದೇ ವಿನಾಕಾರಣ ವಿಳಂಬ ಮಾಡಿದಲ್ಲಿ ಸಂಬಂಧಪಟ್ಟ ಘಟಕಾಧಿಕಾರಿಗಳೇ ಸಂಪೂರ್ಣ ಹೊಣೆಗಾರರಾಗಿರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


