ಚಿತ್ರದುರ್ಗ: ಮದರ್ ಟ್ರೀಮ್ಸ್ ರೂರಲ್ ಮತ್ತು ಅರ್ಬನ್ ಎಜುಕೇಷನ್ ಡೆವಲಪ್ ಮೆಂಟ್ ಸೊಸೈಟಿ, ಶ್ರೀ ಆಂಜನೇಯ ಸ್ವಾಮಿ ಪ್ರೌಢ ಶಾಲೆ ಕಡ್ಲೇಗುದ್ದು ಹಾಗೂ ಶ್ರೀ ಮಲಾರಲಿಂಗೇಶ್ವರ ನರ್ಸಿಂಗ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯನ್ನು ಆಯೋಜಿಸಲಾಗಿದೆ.
ನವೆಂಬರ್ 19ರಂದು ವೀರಯೋಧ ಜಿ.ಎಸ್. ಪ್ರಭಾಕರ ಸಭಾಂಗಣದಲ್ಲಿ ರಾಜ್ಯ ಮಟ್ಟದ ಗ್ರಾಮೀಣ ಮಕ್ಕಳ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ.
ಕಾರ್ಯಕ್ರಮದ ದಿನ ಬೆಳಗ್ಗೆ 8:30ಕ್ಕೆ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣ ನಡೆಯಲಿದೆ. ಕಡ್ಲೆಗುದ್ದು ಗ್ರಾ.ಪಂ. ಸದಸ್ಯರಾದ ಕುಮಾರ್ ಜೆ.ಡಿ. ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ ಪರಿಷತ್ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಶಿವಸ್ವಾಮಿ ಕೆ.ಎಂ. ಅವರು ನಾಡ ಧ್ವಜಾರೋಹಣ ನೆರವೇರಿಸಲಿದ್ದಾರೆ. ಚಿತ್ರದುರ್ಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರಾಮಲಿಂಗ ಶೆಟ್ರು ಪರಿಷತ್ ನ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಬಳಿಕ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ ವಿ. ಹಾಗೂ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಆರ್.ಮಲ್ಲಿಕಾರ್ಜುನಯ್ಯ ಉದ್ಘಾಟಿಸಲಿದ್ದಾರೆ.
ಸಮ್ಮೇಳನದಲ್ಲಿ ನಗೆ ಹಬ್ಬ ಮತ್ತು ಕವಿಗೋಷ್ಠಿ ನಡೆಯಲಿದೆ. ಕಿರಿಯರ ಹಾಗೂ ಬಾಲ ಕವಿಗೋಷ್ಠಿ ಮತ್ತು ಹಿರಿಯರ ಕವಿಗೋಷ್ಠಿಗಳು ನಡೆಯಲಿದೆ. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಈ ಸಮ್ಮೇಳದಲ್ಲಿ ಝೀ ಕನ್ನಡದ ಡಾನ್ಸ್ ಕರ್ನಾಟಕ ಡಾನ್ಸ್ ಸೀಸನ್ 6ನ ವಿಜೇತೆ ಕು.ಪ್ರಣನ್ಯ ಕೂಡ ಭಾಗವಹಿಸಲಿದ್ದಾರೆ. ಈ ಸುಂದರ ಕಾರ್ಯಕ್ರಮವು ನಮ್ಮತುಮಕೂರು ಮಾಧ್ಯಮದಲ್ಲಿ ನೇರ ಪ್ರಸಾರವಾಗಲಿದೆ. ನವೆಂಬರ್ 19ರಂದು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳ ಹಾಗೂ ಸಾಂಸ್ಕೃತಿ ಕಾರ್ಯಕ್ರಮವನ್ನು ನಮ್ಮತುಮಕೂರು ಮಾಧ್ಯಮದಲ್ಲಿ ವೀಕ್ಷಿಸಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


