ಬೆಂಗಳೂರು: ಅತ್ಯಾಚಾರಕ್ಕೊಳಗಾದ 13 ವರ್ಷದ ಸಂತ್ರಸ್ತೆಯ ಗರ್ಭಪಾತ ಮಾಡಿಸಲು ಹೈಕೋರ್ಟ್ ವಾಣಿವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ಗೆ ನಿರ್ದೇಶನ ನೀಡಿದೆ.
ಅತ್ಯಾಚಾರಕ್ಕೊಳಗಾಗಿ ಗರ್ಭ ಧರಿಸಿದ್ದ ಅಪ್ರಾಪ್ತೆ ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ.
ಆಸ್ಪತ್ರೆಯ ವೈದ್ಯರು ಸಂತ್ರಸ್ತೆಯನ್ನು ಪರಿಶೀಲನೆಗೊಳಪಡಿಸಿ ಅವರ ಜೀವಕ್ಕೆ ಹಾನಿಯಾಗುವಂತಿದ್ದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬಹುದು.
ಒಂದು ವೇಳೆ ವೈದ್ಯರ ನಿರ್ಧಾರದಂತೆ ಗರ್ಭ ತೆಗೆಸಿದಲ್ಲಿ ತನಿಖೆಗೆ ನೆರವಾಗುವುದಕ್ಕಾಗಿ ಭ್ರೂಣದ ಡಿಎನ್‌ಎಯನ್ನು ವಿಧಿ ವಿಜ್ಞಾನ ಪ್ರಯೋಗದಲ್ಲಿ ಸಂಗ್ರಹಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.
ಅಲ್ಲದೆ, ವೈದ್ಯರ ಸೂಚನೆ ಮೇರೆಗೆ ಹೆಚ್ಚುವರಿ ಚಿಕಿತ್ಸೆಗೂ ಇದೇ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಬೇಕು. ಯಾವುದೇ ಕಾರಣಕ್ಕೂ ಸಂತ್ರಸ್ತೆಯಿಂದ ಪಡೆದುಕೊಳ್ಳಬಾರದು ಎಂದು ಸೂಚನೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


