ಬೆಂಗಳೂರು: ಪ್ರಧಾನಿ ಮೋದಿಗೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆಯ ಕಾಮಧೇನುವನ್ನು ಮುಜರಾಯಿ ಹಜ್ ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಉಡುಗೊರೆಯಾಗಿ ನೀಡಿದ್ದಾರೆ.
ಇಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಭಾರತ ಗೌರವ್ ಕಾಶಿ ದರ್ಶನ ವಿಶೇಷ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಮುಖ ಕಲೆಯಾಗಿರುವ ಕಿನ್ನಾಳ ಕಲೆಯಲ್ಲಿ ಸ್ಥಳೀಯ ಕಲಾವಿದರಿಂದ ನಿರ್ಮಿಸಲಾಗಿರುವ ಕಾಮಧೇನುವನ್ನು ಉಡುಗೊರೆಯಾಗಿ ನೀಡಲಾಯಿತು.
ನಮ್ಮ ಸ್ಥಳೀಯ ಕಲೆಗೆ ಉತ್ತೇಜನ ನೀಡುವ ಸಲುವಾಗಿ ಈ ಕಾಮಧೇನು ಅನ್ನು ಉಡುಗೊರೆಯಾಗಿ ನೀಡಲಾಗಿದೆ. ಅದನ್ನು ಸ್ವೀಕರಿಸಿದ ಪ್ರಧಾನಿ ಮೋದಿ ಅದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


