ಹಿಂದಿಯ ಖ್ಯಾತ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು.
ಕುಂಕುಮ್, ಕಸೊಟಿ ಜಿಂದಗಿ ಕೀ ಮುಂತಾದ ಜನಪ್ರಿಯ ಧಾರವಾಹಿಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಸೂರ್ಯವಂಶಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಹೃದಯಘಾತದಿಂದ ಕುಸಿದುಬಿದ್ದಿದ್ದಾರೆ.
ಪತ್ನಿ ಅಲೇಸಿಯಾಗೆ ಕೂಡ ಮಾಡೆಲಿಂಗ್ ಕ್ಷೇತ್ರದಲ್ಲಿ ದೊಡ್ಡ ಹೆಸರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. 2017ರಲ್ಲಿ ಅಲೇಸಿಯಾ ಮತ್ತು ಸಿದ್ದಾಂತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸಿದ್ದಾಂತ್ ಮೊದಲ ಪತ್ನಿ ಇರಾ ಚೌಧರಿ್ಡ 2015ರಲ್ಲಿ ವಿಚ್ಛೇದನ ನೀಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy