ಏರ್ ಶೋ ವೇಳೆ ಎರಡು ವಿಮಾನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟಿರುವ ಘಟನೆ ಅಮೆರಿಕದ ಟೆಕ್ಸಾಸ್ ಬಳಿಯ ಡಲ್ಲಾಸ್ ಎಕ್ಸಿಕ್ಯೂಟಿವ್ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದೆ.
ಬೋಯಿಂಗ್ ಬಿ-17 ಹೆಸರಿನ ದೊಡ್ಡ ಹಾಗೂ ಸಣ್ಣ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ವಿಮಾನದಲ್ಲಿದ್ದ 6 ಮಂದಿ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಏರ್ ಶೋ ವೀಕ್ಷಿಸಲು ಬಂದಿದ್ದ ಸಾರ್ವನಿಕರು ಈ ಭಯಾನಕ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಬೋಯಿಂಗ್ ಬಿ-17 ವಿಮಾನ ನೆಲದ ಮೇಲೆ ಅತ್ಯಂತ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದರೆ ಪಕ್ಕದಲ್ಲೇ ಅಡ್ಡ ಬಂದ ಸಣ್ಣ ವಿಮಾನ ಡಿಕ್ಕಿ ಹೊಡೆದಿದೆ. ಎರಡು ವಿಮಾನಗಳು ಬೆಂಕಿ ಹೊತ್ತಿಕೊಂಡು ಧರೆಗುರುಳಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


