ಗಂಡನ ಮನೆ ಹೋಗು ಎಂದು ತಾಯಿ ಬುದ್ದಿವಾದ ಹೇಳಿದ್ದಕ್ಕೆ ಬೇಸರಗೊಂಡ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಉಪ್ಪಾರಬೀದಿಯಲ್ಲಿ (ಮಾವಿನತೋಪು) ನಡೆದಿದೆ.
ಉಪ್ಪಾರಬೀದಿ ನಿವಾಸಿ ಐಶ್ವರ್ಯ (20) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.ಐಶ್ವರ್ಯ ಕುಣಿಗಲ್ ತಾಲೂಕಿನ ಅಮೃತೂರಿನ ಅನಿಲ್‌ಕುಮಾರ್ ಜೊತೆ ಹಲವು ವರ್ಷಗಳ ಹಿಂದೆ ಮದುವೆಯಾಗಿದ್ದು, 2021ರಲ್ಲಿ ಐಶ್ವರ್ಯ ಗರ್ಭಿಣಿಯಾಗಿದ್ದಳು.
ಈ ಸಂದರ್ಭದಲ್ಲಿ ಐಶ್ವರ್ಯಳ ಮೈದುನ ಮತ್ತು ನಾದಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪತಿ ಅನಿಲ್‌ಕುಮಾರ್ ಪತ್ನಿಯನ್ನು ತವರು ಮನೆಗೆ ಬಿಟ್ಟು ಬಂದಿದ್ದರು.
ತವರು ಮನೆಯಲ್ಲೇ ಹೆರಿಗೆ ಆಗಿ ಹಲವು ತಿಂಗಳು ಕಳೆದರೂ ಐಶ್ವರ್ಯ ಗಂಡನ ಮನೆಗೆ ಹೋಗಿರಲಿಲ್ಲ. ಹೀಗಾಗಿ ತಾಯಿ ಮಗಳಿಗೆ ತವರು ಮನೆಗೆ ಹೋಗುವಂತೆ ಬುದ್ಧಿವಾದ ಹೇಳಿದ್ದಾರೆ.
ಬುದ್ಧಿವಾದದಿಂದ ಬೇಸರಗೊಂಡಿದ್ದ ಐಶ್ವರ್ಯ ತಾಯಿ ಮದುವೆಗೆ ಹೋಗಿದ್ದ ವೇಳೆಯಲ್ಲಿ ಮನೆಯಲ್ಲಿ ಯಾರು ಇಲ್ಲದಾಗ ಮನೆಯ ಕೊಠಡಿಯಲ್ಲಿ ಕುತ್ತಿಗೆಗೆ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಗಳ ಸಾವಿನ ಕುರಿತು ತಾಯಿ ನೀಡಿದ ದೂರಿನ ಅನ್ವಯ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


