ಬೆಂಗಳೂರು: ಕಾಲೇಜು ಹಂತದಲ್ಲಿಯೂ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ರಾಜ್ಯ ಸರ್ಕಾರ 2021ನೇ ಸಾಲಿನ ಆಗಸ್ಟ್ 7ರಂದು ಹೊರಡಿಸಿದ್ದ ಎರಡು ಆದೇಶಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯಡಿ ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯಗೊಳಿಸಲಾಗಿತ್ತು. ಆದರೆ ಇದಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರ ಕನ್ನಡ ಕಲಿಕೆ ಕಡ್ಡಾಯಕ್ಕೆ ಅಡ್ಡಗಾಲು ಹಾಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


