ರಾಜ್ಯಾದ್ಯಂತ ಮಾತ್ರವಲ್ಲದೆ ದೇಶದ ಗಮನ ಸೆಳೆದ ಪೇ ಸಿಎಂ ಅಭಿಯಾನ ಜೋರಾಗುತ್ತಿದೆ. ಕಲಬುರಗಿ ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮನ ಹಿನ್ನೆಲೆ ಕಲಬುರಗಿಯಲ್ಲಿ ಪೇ ಸಿಎಂ ಪೋಸ್ಟರ್ ಗಳು ರಾರಾಜಿಸುತ್ತಿವೆ.
ಸಂಗಮೇಶ್ವರ ನಗರ, ಟ್ಯಾಂಕ್ ಬಂಡ್ ರಸ್ತೆ ಸೇರಿದಂತೆ ಅನೇಕ ಕಡೆ ಪೇ ಸಿಎಂ ಪೋಸ್ಟರ್ ಗಳು ರಾರಾಜಿಸುತ್ತಿವೆ. ತಡರಾತ್ರಿ ಪೇ ಸಿಎಂ ಪೋಸ್ಟರ್ ಅಂಟಿಸಿರೋ ಕೈ ಕಾರ್ಯಕರ್ತರು ಅಭಿಯಾನ ತೀವ್ರಗೊಳಿಸಿದ್ದಾರೆ. ವಾರದ ಹಿಂದೆ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಅಂತ ಬಿಜೆಪಿ ಮುಖಂಡರು ಪೋಸ್ಟರ್ ಅಂಟಿಸಿದ್ದರು. ಈ ಘಟನೆ ಚಿತ್ತಾಪುರ ಕ್ಷೇತ್ರ ಹಾಗೂ ಕಲ್ಬುರ್ಗಿಯಲ್ಲಿ ನಗರದಲ್ಲೂ ಹಲವಾರು ಗಲಾಟೆಗಳಿಗೆ ಕಾರಣವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ಕೂಡ ದಾಖಲಾಗಿದೆ.
ಕಾಂಗ್ರೆಸ್ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡ್ತೀನಿ ಎಂಬ ವಿವಾದಾತ್ಮಕ ಹೇಳಿಕೆ ಕೇಳಿಬಂದಿತ್ತು. ಹಾಗಾಗಿ, ಬಿಜೆಪಿ ನಾಯಕರಿಗೆ ಟಕ್ಕರ್ ಕೊಡಲು ಕೈ ಕಾರ್ಯಕರ್ತರು ಪೇ ಸಿಎಂ ಪೋಸ್ಟರ್ ಅಂಟಿಸಿದ್ದಾರೆ. ಈ ಹಿಂದೆ ಸಿಎಂ ನಿವಾಸದ ಬಳಿ ಸೇರಿದಂತೆ ಪೇಸಿಎಂ ಪೋಸ್ಟರ್‌ಗಳು ಸ್ವತಹ ಮುಖ್ಯಮಂತ್ರಿ ಮತ್ತು ಸಕಾರವನ್ನು ಪೇಚಿಗೆ ಸಿಲುಕಿಸಿತ್ತು.
ಈ ಕಾರಣದಿಂದಾಗಿ ಪ್ರತಿಪಕ್ಷ ನಾಯಕರ ವಿರುದ್ಧ ಇರುವ ಹಗರಣಗಳನ್ನು ಹೊರ ತೆಗೆಯುವಂತೆ ಬಿಜೆಪಿ ಹೈ ಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಟಾಸ್ಕ್ ಕೂಡ ನೀಡಿದ್ದು, ಅದರಂತೆ ರಾಜ್ಯ ಬಿಜೆಪಿ ನಾಯಕರು ಪ್ರತಿಪಕ್ಷಗಳ ನಾಯಕರ ವಿರುದ್ಧ ಅಸ್ತ್ರಗಳನ್ನು ಹುಡುಕಿ ಹೊರ ತೆಗೆಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


