ಕಬ್ಬು ಬೆಳೆಗೆ ಬೆಲೆ ನಿಗದಿ ಪಡಿಸಲು ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭೇಟಿಯಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.
ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ವಿಧಾನಸಭೆಯಲ್ಲೂ ಪ್ರಸ್ತಾಪ ಮಾಡಿ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಸಿದ್ದರಾಮಯ್ಯ ರೈತರಿಗೆ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ಈ ಹಿಂದೆ ಹಲವು ಬಾರಿ ಕಬ್ಬು ಸೇರಿದಂತೆ ಎಲ್ಲ ಬಗೆಯ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಪಡಿಸುವಂತೆ ಹಾಗೂ ರೈತರ ನಾನಾ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಸರಕಾರಕ್ಕೆ ಪತ್ರ ಬರೆದಿದ್ದರು. ಈ ಬಗ್ಗೆ ಅನೇಕ ವಿವರಗಳನ್ನು ಆಗಾಗ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದರು.
ಕಬ್ಬು ಮತ್ತೆ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ರೈತರು ಕಳೆದ ಒಂದು ವಾರದಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಪ್ರತಿಭಟನಾನಿರತ ರೈತರ ಭೇಟಿ ವೇಳೆ ಮಾಜಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಆತ್ಮಾನಂದ ಮತ್ತಿತರರು ಸಿದ್ದರಾಮಯ್ಯ ಜೊತೆಗಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


