ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಎಎಸ್ಐ ನಾರಾಯಣಸ್ವಾಮಿಯ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಅರೀಫ್(35) ಹಾಗೂ ಜಮಷೀದ್ ಖಾನ್(27) , ಆಂಧ್ರಪ್ರದೇಶದ ಪಟಾಣ್ ಯಾರಿಸ್ ಖಾನ್(30) ಬಂಧಿತರು. ನ. 8ರಂದು ಬಾಗೇಪಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆ ಮೇಲೆ ದಾಳಿ ಮಾಡಿ ಮನೆಯಲ್ಲಿದ್ದ ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ, ಮನೆಯಲ್ಲಿದ್ದ ನಗನಾಣ್ಯ ಲೂಟಿ ಮಾಡಿದ್ದರು. ಅಡ್ಡ ಬಂದಿದ್ದ ಮನೆ ಮಾಲೀಕ ನಾರಾಯಣಸ್ವಾಮಿ ಮೇಲೆ ಹಲ್ಲೆ ನಡೆಸಿದ್ದರು. ಜೊತೆಗ ನಾರಾಯಣಸ್ವಾಮಿ ಪುತ್ರ ಶರತ್ ಕಾಲಿಗೆ ಗುಂಡು ಹಾರಿಸಿದ್ದರು.
ಈ ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಸದ್ಯ ಮೂವರನ್ನ ಬಂಧಿಸಿದ್ದು, ಬಂಧಿತರಿಂದ ಮೂರು ನಾಡ ಪಿಸ್ತೂಲ್ , ಖಾಲಿ ಮ್ಯಾಗ್ಜಿನ್ ಹೊಂದಿರುವ ಒಂದು ಪಿಸ್ತೂಲ್, 3 ಲಕ್ಷದ 41000 ನಗದು, ಕೃತ್ಯಕ್ಕೆ ಬಳಸಿದ ಕಾರು, 71 ಗ್ರಾಂ ತೂಕದ ಚಿನ್ನದ ಸರ, 21 ಬೆಳ್ಳಿಯ ಪೂಜಾ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


