ಕಲಬುರಗಿಯಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮಲ್ಲಿಕಾರ್ಜುನ್ ಮುತ್ಯಾಲ (64) ಹತ್ಯೆಯಾದ ವ್ಯಕ್ತಿ.
ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ಕೊಲೆ ನಡೆದಿದ್ದು, ಮರ್ಮಾಂಗಕ್ಕೆ ಚಾಕು ಇರಿದು , ಕುತ್ತಿಗೆಗೆ ಹಗ್ಗ ಬಿಗಿದು ಭೀಕರವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದ ಮಲ್ಲಿಕಾರ್ಜುನ ಮುತ್ಯಾಲ ಎಲೆಕ್ಟ್ರಾನಿಕ್ ಅಂಗಡಿ ಮತ್ತು ಟಿವಿ ಶಾಪ್ ಮಾಲೀಕರಾಗಿದ್ದರು. ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಭೇಟಿ ನೀಡಿದ್ದಾರೆ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


