ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಿಲಾರಹಟ್ಟಿ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬರ ಹತ್ಯೆಯಾಗಿದೆ. 55 ವರ್ಷದ ಮರಗು ಪಾಂಡ್ರೆ ಹತ್ಯೆಯಾಗಿರುವ ದುರ್ದೈವಿ.
ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೀರು, ಮಾಳಪ್ಪ ಹಾಗೂ ಇನ್ನೋರ್ವ ಆರೋಪಿ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜಾಗದ ವಿಷಯಕ್ಕೆ ಹಲವು ದಿನಗಳಿಂದ ಇಬ್ಬರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


