ಹೆಸರಾಂತ ಲೇಖಕ ಸಿ. ಮೇರಿ ಜೋಸೆಫ್ ಅವರಿಗೆ ನವಂಬರ್ 26 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕುಮಾರ ಕೃಪಾ ರಸ್ತೆಯ ಗಾಂಧಿ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ “ರೆವೆರೆಂಡ್ ಕಿಟ್ಟಲ್” ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಬಿ.ವಿ. ಪಿಂಟೋ ಅವರು ಸಿ. ಮೇರಿ ಜೋಸೆಫ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರು ಈ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ರೆವೆರೆಂಡ್ ಫರ್ಡಿನೆಂಡ್ ಕಿಟ್ಟಲ್ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


