ಕೊರಟಗೆರೆ: ಕೊರಟಗೆರೆ ತಾಲೂಕ್ ಕವರ್ಗಲ್ ಕಂಬದಹಳ್ಳಿ ಕೆರೆ ಕಟ್ಟೆ ಒಡೆದ ಪರಿಣಾಮ ನೀರು ಕೊರಟಗೆರೆ ಜಂಪೇನಹಳ್ಳಿ, ಅಗ್ರಹಾರ ಕೆರೆಗೆ ಹರಿಯುತ್ತಿದ್ದು, ಇದರಿಂದಾಗಿ ಎರಡೂ ಕೆರೆಗೂ ಅಪಾಯವಾಗುವ ಸಾಧ್ಯತೆ ಇದ್ದು, ಸ್ಥಳಕ್ಕೆ ತಹಶೀಲ್ದಾರ್ ನಹೀದಾ ಜಮ್ ಜಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆರೆಯ ಕಟ್ಟೆ ಒಡೆದ ಪರಿಣಾಮ ನೀರು ರಭಸವಾಗಿ ನುಗುತ್ತಿದ್ದು, ರೈತರ ನೂರಾರು ಎಕರೆ ಜಮೀನು ನಷ್ಟವಾಗುವ ಭೀತಿ ಸೃಷ್ಟಿಯಾಗಿದೆ. ಇಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ್ ನಹೀದಾ ಜಮ್ ಜಮ್ ಸ್ಥಳಕ್ಕೆ ಭೇಟಿ ನೀಡಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ, ದೊಡ್ಡ ಗಾತ್ರದಲ್ಲಿ ಕುಸಿದು ಬಿದ್ದ ಪರಿಣಾಮ 2 ಗಂಟೆಯಲ್ಲಿ ನೀರು ಖಾಲಿಯಾಗಿತ್ತು. ಘಟನಾ ಸ್ಥಳಕ್ಕೆ ಅಧಿಕಾರಿಗಳ ಸ್ಥಳಕ್ಕೆ ದೌಡಾಯಿಸಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


