ಉತ್ತರ ಬಂಗಾಳದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ವೇದಿಕೆಯಲ್ಲಿಯೇ ಅಸ್ವಸ್ಥಗೊಂಡಿದ್ದಾರೆ. ಶಿವಮಂದಿರದಿಂದ ಸೇವಕ್ ಕಂಟೋನ್ಮೆಂಟ್‌ವರೆಗಿನ ರಸ್ತೆಯ ಶಂಕುಸ್ಥಾಪನೆ ಮಾಡಲು ಗಡ್ಕರಿ ಸಿಲಿಗುರಿಗೆ ಬಂದಿದ್ದರು.
ಕಾರ್ಯಕ್ರಮವನ್ನು ಡಾರ್ಜಿಲಿಂಗ್ ಜಂಕ್ಷನ್ ಬಳಿ ದಗಾಪುರ್ ಮೈದಾನದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರು ವೇದಿಕೆಯಲ್ಲಿದ್ದಾಗ ಏಕಾಏಕಿ ಅನಾರೋಗ್ಯಕ್ಕೀಡಾದರು. ಕೂಡಲೇ ವೇದಿಕೆಯ ಹಿಂದಿನ ಗ್ರೀನ್ ರೂಮ್‍ಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.
ಹೆಚ್ಚಿನ ಚಿಕಿತ್ಸೆಗಾಗಿ ಸಿಲಿಗುರಿಯಿಂದ ಗ್ರೀನ್ ಕಾರಿಡಾರ್ ಮೂಲಕ ವೈದರನ್ನು ಕರೆಸಿ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡ ಬಳಿಕ ಡಾರ್ಜಿಲಿಂಗ್ ಸಂಸದ ರಾಜು ಬಿಸ್ತಾ ಸಚಿವರನ್ನು ಮನೆಗೆ ಕರೆದುಕೊಂಡು ಹೋದರು.
ಗಡ್ಕರಿ ರಕ್ತದಲ್ಲಿ ಸಕ್ಕರೆ ಪ್ರಮಾಣ ಇಳಿದಿದೆ. ಹೀಗಾಗಿ ವೈದ್ಯರ ಸೂಚನೆಯಂತೆ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಮನೆಯಲ್ಲಿಯೇ ಚಿಕಿತ್ಸೆ ನಡೆಯುತ್ತಿದ್ದು, ವೈದ್ಯರು ಕೂಡ ಅಲ್ಲಿಯೇ ಇದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


