ನವದೆಹಲಿ : ದೇಶೀಯ ಸಿಲಿಂಡರ್ ಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಪಿಜಿ ಸಿಲಿಂಡರ್ಗಳು ಶೀಘ್ರದಲ್ಲೇ ಕ್ಯೂಆರ್ ಕೋಡ್ಗಳೊಂದಿಗೆ ಬರಲಿವೆ.
ಟ್ರ್ಯಾಕಿಂಗ್ ಮತ್ತು ಟ್ರೇಸ್ ಉಪಕ್ರಮವು ಸಿಲಿಂಡರ್ ಕಳವನ್ನು ತಡೆಯಲು ನೆರವಾಗಲಿದೆ.ಜೊತೆಗೆ ಸಿಲಿಂಡರ್‌ಗಳ ಉತ್ತಮ ದಾಸ್ತಾನು ನಿರ್ವಹಣೆಯನ್ನು ಪತ್ತೆಹಚ್ಚಲು ಮತ್ತು ಖಚಿತಪಡಿಸಿಕೊಳ್ಳಲು ಕೂಡ ಅನುಕೂಲ ಮಾಡಿಕೊಡಲಿದೆ.
ಕ್ಯೂಆರ್ ಕೋಡ್ ಅನ್ನು ಅಸ್ತಿತ್ವದಲ್ಲಿರುವ ಸಿಲಿಂಡರ್ ಗಳಲ್ಲಿ ಅಂಟಿಸಲಾಗುವುದು ಮತ್ತು ಹೊಸದಕ್ಕೆ ಕೂಡ ಬೆಸುಗೆ ಹಾಕಲಾಗುತ್ತದೆ.
ಕ್ಯೂಆರ್ ಕೋಡ್ ಸಕ್ರಿಯಗೊಳಿಸಿದಾಗ ಇದು ಗ್ಯಾಸ್ ಸಿಲಿಂಡರ್ ಗಳ ಕಳ್ಳತನ, ಟ್ರ್ಯಾಕಿಂಗ್ ಮತ್ತು ಟ್ರೇಸಿಂಗ್ ದಾಸ್ತಾನು ನಿರ್ವಹಣೆ ಹೀಗೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಹಾಯಕವಾಗಲಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy