ಬೆಂಗಳೂರು: ಶ್ರೀಗಂಧ ನೀತಿ -2022ಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದ್ದು, ರೈತರು ತಮ್ಮ ಜಮೀನಿನಲ್ಲಿ ಶ್ರೀಗಂಧ ಬೆಳೆದು ಮಾರಾಟ ಮಾಡಬಹುದು ಎಂದು ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡಬಹುದು. ಜಾಗತಿಕ ಮಟ್ಟದಲ್ಲಿ ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಶ್ರೀಗಂಧ ನೀತಿ ಸರಳೀಕರಣ ಮಾಡಲಾಗಿದೆ.
ಶ್ರೀಗಂಧ ಬೆಳೆಯುವ ರೈತರಿಗೆ ಮಾರ್ಗದರ್ಶನ ನೀಡಲಾಗುವುದು. ರೈತರು ಬೆಳೆಯುವ ಶ್ರೀಗಂಧಕ್ಕೆ ರಕ್ಷಣೆ ಒದಗಿಸಲಾಗುವುದು.
ಪ್ರಸ್ತುತ ದಿನಗಳಲ್ಲಿ ಶ್ರೀಗಂಧ ಲಭ್ಯತೆಯ ಕೊರತೆ ಇದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಶ್ರೀಗಂಧ ಬೇಕಾಗಿದೆ. ಹೀಗಾಗಿ ಶ್ರೀಗಂಧ ಮಾರಾಟಕ್ಕೆ ಇದ್ದ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


