ವಿಜಯಪುರ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಂತ್ಯ ಕಾಲ ಹತ್ತಿರವಾಗಿದೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅಂತ್ಯ ಕಾಲ ಹತ್ತಿರವಾಗಿದೆ, ಅದಕ್ಕಾಗಿಯೇ ಈ ತರಹದ ಹೇಳಿಕೆ ನೀಡುತ್ತಿದ್ದಾರೆ.
ನನಗೆ ಗೋಕಾಕ್ ಬರಲು ಆಹ್ವಾನ ನೀಡಿದ್ದರು. ಆದ್ದರಿಂದ ನಾನು ಗೋಕಾಕ್ ಗೆ ಹೋಗಿದ್ದೆ, ಆ ಕ್ಷೇತ್ರಕ್ಕೆ ಹೋಗಲು ಯಾರಿಗೂ ಧಮ್ ಇಲ್ಲ ಎನ್ನುವಂತಾಗಿತ್ತು ಎಂದರು.
ಸತೀಶ್ ಜಾರಕಿಹೊಳಿ ಅವರ ತಪ್ಪನ್ನು ಸರಿಮಾಡಿಕೊಳ್ಳಬೇಕು, ಇಂತಹ ಹೇಳಿಕೆಗಳನ್ನು ನೀಡಬಾರದು. ಅವರ ಅಂತ್ಯ ಕಾಲ ಹತ್ತಿರವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


