ಹೆಚ್.ಡಿ.ಕೋಟೆ: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಪ್ರಯುಕ್ತ ಕಂದಾಯ ಸಚಿವ ಆರ್. ಅಶೋಕ್ ಹೆಚ್ ಡಿ ಕೋಟೆ ತಾಲ್ಲೂಕಿನ ಎನ್.ಬೇಗೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಭೀಮನ ಕೊಲ್ಲಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದರು.
ನಂದಿ ಕಂಬಕ್ಕೆ ಪೂಜೆ ಸಲ್ಲಿಸಿ ಸಚಿವ ಅಶೋಕ್ ರನ್ನು ಟ್ರಾಕ್ಟರ್ ನಲ್ಲಿ ಸುಮಾರು ಇನ್ನೂರು ಮೀಟರ್ ತನಕ ಜಾನಪದ ಕಲಾ ತಂಡಗಳ ಮೂಲಕ ಮೆರವಣಿಗೆ ತರಲಾಯಿತು.
ಭೀಮನಕೊಲ್ಲಿ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಆರ್.ಅಶೋಕ್ ಹಾಗೂ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ರವರು ಪುಷ್ಪಾರ್ಚನೆ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ಕಾರ್ಯಕ್ರಮದ ಪ್ರಯುಕ್ತ ತೆರೆದಿದ್ದ ಮಳಿಗೆಗಳನ್ನು ಉದ್ಘಾಟಿಸಿ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿದರು
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


