ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದು ಪತಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದ ಗಂಡನ ಮನೆಯಲ್ಲಿ ವಾಸವಾಗಿದ್ದ ಶ್ರುತಿ (24) ಕೊಲೆಯಾದ ಗೃಹಿಣಿ.
ತರಬನಹಳ್ಳಿ ನಿವಾಸಿಯಾಗಿರುವ ಶೃತಿಯನ್ನು ಪತಿ ಕೃಷ್ಣಮೂರ್ತಿ ಕೊಲೆಗೈದಿದ್ದಾನೆ. ಮದುವೆಯಾಗಿ ಒಂದೂವರೆ ವರ್ಷದ ಹಿಂದೆಯಷ್ಟೇ ಇಬ್ಬರ ಮದುವೆ ಆಗಿತ್ತು.
ತರಬನಹಳ್ಳಿ ನಿವಾಸಿಯಗಿರುವ ಶೃತಿಯನ್ನು ಪತಿ ಕೃಷ್ಣಮೂರ್ತಿ ಕೊಲೆಗೈದಿದ್ದಾನೆ. ಬಳಿಕ ಭೂಸಂದ್ರ ಗ್ರಾಮದ ತನ್ನ ನಿವಾಸದಿಂದ ನಾಪತ್ತೆಯಾಗಿದ್ದಾನೆ.
ಸದ್ಯ ಮೃತ ಶೃತಿ ಕುಟುಂಬದವರು ವರದಕ್ಷಿಣೆ ಕಿರುಕುಳ ಆರೋಪ ಮಾಡುತ್ತಿದ್ದಾರೆ. ಮೃತ ಶೃತಿ ದೇಹದ ತುಂಬಾ ಗಂಭೀರವಾದ ಗಾಯದ ಗುರುತುಗಳು ಪತ್ತೆಯಾಗಿವೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Reporting by Antony begur
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


