ಮಧುಗಿರಿ: ಹಸು ಮೇಯಿಸಲು ಹೋಗಿದ್ದ ಮಹಿಳೆ ಮತ್ತು ಹಸು ಇಬ್ಬರೂ ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತಾಲೂಕು ಮಿಡಿಗೇಶಿ ಹೋಬಳಿ ಲಕ್ಲಹಟ್ಟಿಗ್ರಾಮದಲ್ಲಿ ನಡೆದಿದೆ.
ರತ್ನಮ್ಮ(45) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಪ್ರತಿನಿತ್ಯದಂತೆ ಹಸುಗಳನ್ನು ಮೇಯಿಸಲು ಹೋಗಿದ್ದ ವೇಳೆ ಉಗರಡ್ಡಿ ಎಂಬುವವರ ಜಮೀನಿನಲ್ಲಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಹಸು ಸ್ಪರ್ಶಿಸಿದೆ. ಹಸುವನ್ನು ರಕ್ಷಿಸಲು ಹೋದ ರತ್ನಮ್ಮಗೆ ಕೂಡ ವಿದ್ಯುತ್ ಸ್ಪರ್ಶಿಸಿದ್ದು, ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಮಿಡಿಗೇಶಿ ಬೆಸ್ಕಾಂ ಇಲಾಖೆಯ ಸೆಕ್ಷನ್ ಆಫೀಸರ್ ಅಕ್ರಮ್ ಪಾಷಾ ಭೇಟಿ ನೀಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿಸಿದರು.
ಇನ್ನೂ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಊರಿನವರು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಗೆ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಇನ್ನೂ ಇಲಾಖೆ ಅಧಿಕಾರಿಗಳು ಮೃತ ಮಹಿಳೆಯ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ವರದಿ: ಲಕ್ಷ್ಮಿಪತಿ, ದೊಡ್ಡ ಯಲ್ಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz