nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಸಿಬಿ ಘರ್ಜನೆ: 30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ
    ರಾಜ್ಯ ಸುದ್ದಿ November 23, 2022

    ಜೆಸಿಬಿ ಘರ್ಜನೆ: 30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

    By adminNovember 23, 2022No Comments2 Mins Read
    bu othuvaree

    ಭೂಒತ್ತುವರಿದಾರರ ವಿರುದ್ಧದ ದಾಳಿಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಸುಮಾರು 30 ಕೋಟಿ ರೂಪಾಯಿ ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.

    ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿ ಸರ್ವೆ ಸಂಖ್ಯೆ 4/1 ರಲ್ಲಿ 22 ಗುಂಟೆ ಜಾಗ ಬಿಡಿಎಗೆ ಸೇರಿದ್ದಾಗಿತ್ತು. ಆದರೆ, ಕೆಲವು ಅತಿಕ್ರಮಣದಾರರು ಸದರಿ ಜಾಗದಲ್ಲಿ ಕಳೆದ ಹತ್ತು ವರ್ಷಗಳಿಂದ ತಾತ್ಕಾಲಿಕ್ ಶೆಡ್ ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು.


    Provided by
    Provided by

    ಇತ್ತೀಚೆಗೆ ಬಿಡಿಎ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ಅವರು ಸದರಿ ಜಾಗ ಸೇರಿದಂತೆ ಇನ್ನಿತರೆ ಒತ್ತುವರಿ ಮತ್ತು ಬಿಡಿಎ ಜಾಗವನ್ನು ಕಬ್ಜ ಮಾಡಿಕೊಂಡಿರುವ ಪ್ರದೇಶಗಳಿಗೆ ಭೇಟಿ ನೀಡಿ, ಕೂಡಲೇ ಇಂತಹ ಜಾಗಗಳನ್ನು ಮರುವಶಕ್ಕೆ ಪಡೆದುಕೊಳ್ಳಬೇಕೆಂದು ಬಿಡಿಎ ಅಧಿಕಾರಿಗಳು ಮತ್ತು ಎಂಜಿನಿಯರ್ ಗಳಿಗೆ ಸೂಚನೆ ನೀಡಿದ್ದರು.

    ಅದರನ್ವಯ ಮಂಗಳವಾರ ಬಿಡಿಎ ಆಯುಕ್ತರ ಆದೇಶ ಪಡೆದ ಬಿಡಿಎ ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿ ನಂಜುಂಡೇಗೌಡ ಮತ್ತು ಪೊಲೀಸ್ ಅಧಿಕಾರಿಗಳಾದ ರವಿಕುಮಾರ್, ಶ್ರೀನಿವಾಸ್ ಹಾಗೂ ಎಂಜಿನಿಯರ್ ಅಶೋಕ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ 6 ತಾತ್ಕಾಲಿಕ ಶೆಡ್ ಗಳನ್ನು ತೆರವುಗೊಳಿಸಲಾಯಿತು.

    ನಕಲಿ ಎನ್ ಒಸಿ ಇದ್ದರೆ ಕ್ರಿಮಿನಲ್ ಕೇಸ್: ವಿಶ್ವನಾಥ್ ಎಚ್ಚರಿಕೆ

    ಈ ಬಗ್ಗೆ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಈ ಹಿಂದೆ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಹಣದಾಸೆಗೆ ಬಿದ್ದು ಪ್ರಭಾವಿಗಳು ಮತ್ತು ಭೂಕಬಳಿಕೆದಾರರಿಗೆ ನಕಲಿ ಎನ್ಒಸಿಗಳನ್ನು ಕೊಟ್ಟು ಬಿಡಿಎ ಜಾಗವನ್ನು ಅತಿಕ್ರಮಣವಾಗುವಂತೆ ಮಾಡಿದ್ದರು. ಇದೀಗ ಇಂತಹ ನಕಲಿ ಎನ್ ಒಸಿ ಪ್ರಕರಣಗಳನ್ನು ಬಯಲಿಗೆ ತರಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿ ತಪ್ಪೆಸಗಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಅದೇ ರೀತಿ, ನಕಲಿ ಎನ್ ಒಸಿ ಬಳಸಿಕೊಂಡು ಬಿಡಿಎ ಜಾಗವನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಂಡಿರುವ ಕಬಳಿಕೆದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಹೀಗೆ ನಕಲಿ ಎನ್ ಒಸಿ ಅಥವಾ ನಕಲಿ ದಾಖಲೆಗಳನ್ನು ಇಟ್ಟುಕೊಂಡು ಬಿಡಿಎ ಜಾಗದ ಮೇಲೆ ಹಿಡಿತ ಸಾಧಿಸುತ್ತಿರುವವರು ಕೂಡಲೇ ಅಂತಹ ದಾಖಲೆಗಳನ್ನು ನೀಡಿ ಬಿಡಿಎ ಜಾಗವನ್ನು ಬಿಟ್ಟುಕೊಡಬೇಕು. ಇಲ್ಲವಾದರೆ ಕಾನೂನು ರೀತಿಯಲ್ಲಿ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದೂ ವಿಶ್ವನಾಥ್ ಎಚ್ಚರಿಕೆ ನೀಡಿದರು.

    ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ

    ಈ ಮಧ್ಯೆ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಡಿಎ ಜಾಗದಲ್ಲಿ ಹಿಡಿತ ಸಾಧಿಸುತ್ತಿರುವವರ ಭೂಕಬಳಿಕೆದಾರರ ಬಗ್ಗೆ ಮಾಹಿತಿ ಮತ್ತು ದಾಖಲೆಗಳಿದ್ದರೆ ಬಿಡಿಎ ಅಧ್ಯಕ್ಷರು, ಆಯುಕ್ತರು ಮತ್ತು ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತರಬೇಕೆಂದು ಮನವಿ ಮಾಡಿರುವ ವಿಶ್ವನಾಥ್, ಹೀಗೆ ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಟ್ಟು, ತನಿಖೆ ನಡೆಸಿ ಅಂತಹ ಜಾಗಗಳನ್ನು ವಶಕ್ಕೆ ಪಡೆದು, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

    admin
    • Website

    Related Posts

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.