ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರುನಾಡ ವಿಜಯ ಸೇನೆ ಸಂಘಟನೆಯ ತಾಲೂಕು ಘಟಕದ ತಾಲೂಕು ಅಧ್ಯಕ್ಷರಾದ ಎಚ್.ಎಸ್.ಸುರೇಶ್ ರವರ ನೇತೃತ್ವ ಅದ್ದೂರಿ ಕನ್ನಡ ರಾಜ್ಯೋತ್ಸವದ ಆಚರಣೆಗೆ ಪೂರ್ವಭಾವಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ನವೆಂಬರ್ 28ರಂದು ನಡೆಯುವ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮಕ್ಕೆ ಸಂಘಟನೆಯ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಕಾರ್ಯಕ್ರಮದ ಜವಾಬ್ದಾರಿಗಳನ್ನು ಹಂಚಲಾಯಿತು.
ಸಮಾರಂಭದಲ್ಲಿ ವೈದ್ಯರು.ಹಾಗೂ ತಾಲೂಕು ಮಟ್ಟದ ಸರ್ಕಾರಿ ಅಧಿಕಾರಿಗಳನ್ನು ಸನ್ಮಾನಿಸುವುದು, ಉಚಿತ ಆರೋಗ್ಯ ಮೇಳ, ಆರ್ಕೆಸ್ಟ್ರಾ ಕಾರ್ಯಕ್ರಮ ಹಮ್ಮಿಕೊಳ್ಳುವುದು ಸೇರಿದಂತೆ ವಿವಿಧ ರೂಪುರೇಷೆಗಳನ್ನು ತಾಲೂಕು ಅಧ್ಯಕ್ಷ ಹೆಚ್.ಎಸ್. ಸುರೇಶ್ ನೇತೃತ್ವದಲ್ಲಿ ರೂಪಿಸಲಾಯಿತು.
ಈ ಸಂದರ್ಭದಲ್ಲಿ ಎಲ್ಲ ತಾಲೂಕು ಸಂಘಟನೆಯ ಅಧ್ಯಕ್ಷರು.ಹಾಗೂ ಪದಾಧಿಕಾರಿಗಳು ಹಾಜರಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz