ಬೆಳಗಾವಿ : ಗಡಿಭಾಗದಲ್ಲಿ ಕರ್ನಾಟಕದ ಬಸ್ಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆಯುತ್ತಿರುವುದು ಈಗ ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಹೀಗಾಗಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಅಖಿಲ ಭಾರತೀಯ ಮರಾಠ ಸಂಘದ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದು, ಮಹಾರಾಷ್ಟ್ರ ಬಸ್ ಗಳಿಗೂ ಕಪ್ಪು ಮಸಿ ಬಳಿಯುವ ಭೀತಿ ಹಿನ್ನೆಲೆ ಏಕಾಏಕಿ 300ಕ್ಕೂ ಅಧಿಕ ಬಸ್ ಗಳನ್ನು ಸಂಚಾರವನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಥಗಿತ ಮಾಡಿದೆ.
ಇತ್ತ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಎಂದಿನಂತೆ ಬಸ್ ಗಳು ತೆರಳುತ್ತಿವೆ. ನಿಪ್ಪಾಣಿಯ ಬಸ್ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ.
ಒಂದು ಡಿಆರ್ ತುಕಡಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಪೊಲೀಸರು ಕ್ರಮ ವಹಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


