nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಕ್ಕರ್ ಸ್ಫೋಟ ಪ್ರಕರಣ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗ!
    ರಾಜ್ಯ ಸುದ್ದಿ November 26, 2022

    ಕುಕ್ಕರ್ ಸ್ಫೋಟ ಪ್ರಕರಣ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗ!

    By adminNovember 26, 2022No Comments2 Mins Read
    sharek

    ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ)ಗೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರ ಶಾರೀಕ್ ಈಗಾಗಲೇ ಪೊಲೀಸರ ವಶದಲ್ಲಿದ್ದು, ತನಿಖೆಯಲ್ಲಿ ದೇವಸ್ಥಾನ, ಪೊಲೀಸರನ್ನು ಗುರಿಯಾಗಿಸಿ ದಾಳಿ ನಡೆಸುವುದು ಸೇರಿದಂತೆ ಹಲವಾರು ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತನಿಖೆಯನ್ನು ಎನ್ ಐಗೆ ಹಸ್ತಾಂತರಿಸಿದೆ.

    ಒಂದು ವೇಳೆ ಆಟೋದಲ್ಲಿ ಕುಕ್ಕರ್ ಬ್ಲಾಸ್ಟ್ ಆಗದೇ ಇದ್ದಿದ್ರೆ ಮಂಗಳೂರಿನ ಪ್ರಸಿದ್ಧ ದೇಗುಲಗಳು, ಬಸ್ ನಿಲ್ದಾಣ ಹಾಗೂ ಆರ್​​ಎಸ್​ಎಸ್​ ಕಚೇರಿ ಶಾರೀಕ್​ನ ಟಾರ್ಗೆಟ್ ಆಗಿತ್ತು ಎನ್ನುವ ಆಘಾತಕಾರಿ ಅಂಶಗಳು ಪೊಲೀಸ್ ತನಿಖೆ ವೇಳೆ ಹೊರಬಂದಿವೆ.

    ಉಗ್ರ ಶಾರೀಕ್ ವಿರುದ್ಧ UAPA ಕಾಯ್ದೆ ಅನ್ವಯ ಕೇಸ್​ ದಾಖಲು ಮಾಡಲಾಗಿದ್ದು, ಪ್ರಕರಣದ ತೀವ್ರತೆ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ NIAಗೆ ಕೇಸ್ ವರ್ಗಾವಣೆ ಮಾಡಲಾಗಿದ್ದು, ಇಂದು NIA ಅಧಿಕಾರಿಗಳು ಶಾರೀಕ್ ನ ತೀವ್ರ ವಿಚಾರಣೆ ಒಳಪಡಿಸಿದ್ದಾರೆ.

    ಮಂಗಳೂರಿನಲ್ಲಿ ಎನ್ ಐಎ ಘಟಕ ಸ್ಥಾಪನೆ?

    ಕಂಕನಾಡಿಯಲ್ಲಿ ಇತ್ತೀಚೆಗೆ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯ ಹೊಣೆಯನ್ನು ಈಗಾಗಲೇ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲಾಗಿದ್ದು, ಘಟನೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು.

    ಮಂಗಳೂರಿನ ನಾಗುರಿಗೆ ಶುಕ್ರವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರ್ಕಾರವು ಪ್ರಯತ್ನಿಸುತ್ತಿದೆ. ಉಗ್ರರ ಸಂಚುಗಳನ್ನು ವಿಫಲಗೊಳಿಸಲಾಗುತ್ತಿದೆ. ಹಿಂದೂಗಳನ್ನು ಟಾರ್ಗೆಟ್ ಮಾಡುವ ಅವರ ಪ್ರಯತ್ನ ವಿಫಲವಾಗಿದೆ ತನಿಖೆ ದೃಷ್ಟಿಯಿಂದ ಗೃಹಸಚಿವರು ಮೊದಲು ಭೇಟಿ ನೀಡಿದ್ದಾರೆ ಎಂದು ಅವರು ತಿಳಿಸಿದರು.

    ಮಂಗಳೂರಿನಲ್ಲಿ ಇಂದಲ್ಲ ನಾಳೆ NIA ಘಟಕ ಸ್ಥಾಪಿಸಲಾಗುವುದು. ಕೇಂದ್ರ ಸರ್ಕಾರವೂ ಈ ಬಗ್ಗೆ ಸಕಾರಾತ್ಮಕವಾಗಿ ಪರಿಶೀಲನೆ ನಡೆಸುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಇಂಥ ವಾತಾವರಣ ಸೃಷ್ಟಿಯಾಗಬಾರದು ಬಾಂಬ್ ಸ್ಪೋಟದ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದನೆಯ ಆತಂಕವನ್ನು ಸರ್ಕಾರವು ಸದೃಢವಾಗಿ ಎದುರಿಸುತ್ತಿದೆ. ಭಯೋತ್ಪಾದಕರ ಬಗ್ಗೆ ನಮ್ಮ ಸರ್ಕಾರವು ಎಂದಿಗೂ ಮೃದು ಧೋರಣೆ ತಳೆದಿಲ್ಲ ಎಂದು ಅವರು ವಿವರಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.