ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರಿಗೆ ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನದ ಸಾಧನೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ.
ನೂರಾರು ಸಿನಿಮಾಗಳಲ್ಲಿ ನಟನೆ, 40ಕ್ಕೂ ಹೆಚ್ಚು ಸಿನಿಮಾ ನಿರ್ಮಾಣ ಮಾಡಿ ಸುಮಾರು 50ಕ್ಕೂ ಹೆಚ್ಚು ವರ್ಷಗಳಿಂದ ಚಿತ್ರರಂಗದಲ್ಲಿ ಸಾಧನೆ ಮಾಡಿರುವ ದ್ವಾರಕೀಶ್ ಅವರಿಗೆ ಬೆಂಗಳೂರು ವಿವಿ 57ನೇ ಘಟಿಕೋತ್ಸವದಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಲಾಗಿದೆ.
ಡಿಸೆಂಬರ್ 5ರಂದು ಬೆಂಗಳೂರಿನ ಜ್ಞಾನಭಾರತಿ ಅಡಿಟೋರಿಯಂನಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ದ್ವಾರಕೀಶ್ ಅಲ್ಲದೇ ಕಾನೂನು ಅಟಾರ್ನಿ ಹಾಗೂ ನ್ಯಾಯ ಸಲಹೆಗಾರರು ವಿಭಾಗ ಅಮರನಾಥ ಗೌಡ, ವರ್ಣ ಚಿತ್ರಕಾರ ಡಾ.ಟಿ. ಅನಿಲ್ ಕುಮಾರ್ ಮುಂತಾದವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


