ನೋಟು ರದ್ದತಿ ನೀತಿ ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಒಕ್ಕೂಟ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಟಾರ್ನಿ ಜನರಲ್ (ಎಜಿ) ಆರ್ ವೆಂಕಟರಮಣಿ, ಅದೊಂದು ವಿಫಲ ಯೋಜನೆ ಎಂದು ಒಪ್ಪಿಕೊಂಡಿದ್ದು, ವಿಫಲವಾದ ಮಾತ್ರಕ್ಕೆ ಅವರ ಉದ್ದೇಶ ದೋಷಪೂರಿತ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್, ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ. ರಾಮಸುಬ್ರಮಣ್ಯಂ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠವು ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ.
ಸುಪ್ರೀಂ ಕೋರ್ಟ್ ಅಕ್ಟೋಬರ್ 12 ರಂದು ಪ್ರಾಥಮಿಕ ವಿಚಾರಣೆಯನ್ನು ನಡೆಸಿತ್ತು. ಹಿರಿಯ ವಕೀಲ, ನಾಲ್ಕು ಬಾರಿ ಹಣಕಾಸು ಸಚಿವರಾಗಿದ್ದ ಪಿ. ಚಿದಂಬರಂ ನೋಟು ರದ್ದತಿ ನೀತಿಯು ಅಸಾಂವಿಧಾನಿಕ ಎಂದು ವಾದಿಸಿದ್ದರು. ಬ್ಯಾಂಕ್ ಆಫ್ ಇಂಡಿಯಾ ಕಾಯಿದೆಯ ಮೀಸಲು ಸೆಕ್ಷನ್ 26 (2) ರ ವ್ಯಾಪ್ತಿಯನ್ನು ಪ್ರಶ್ನಿಸಿದ್ದರು.
500 ಮತ್ತು 1,000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್‌ನೊಂದಿಗೆ ವ್ಯಾಪಕವಾದ ಸಮಾಲೋಚನೆಯ ನಂತರ ಮತ್ತು ನೋಟು ನಿಷೇಧವನ್ನು ಜಾರಿಗೊಳಿಸುವ ಮೊದಲು ಪೂರ್ವ ಸಿದ್ಧತೆಗಳನ್ನು ಮಾಡಿದ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ವಿವರಿಸಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy