ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿರುವ ಚನ್ನಮ್ಮನ ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಹಾಲಗಿ ಹಾಗೂ ಗುಮಾಸ್ತ ಜಿ.ಪ್ರಸನ್ನ ಅವರನ್ನು ಲೋಕಾಯುಕ್ತ ಪೊಲೀಸರು ಹಿಂಡಲಗಾ ಜೈಲಿಗೆ ಅಟ್ಟಿದ್ದಾರೆ.
ಪೊಲೀಸ್ ವಾಹನದಲ್ಲಿ ಜೈಲಿಗೆ ಬಂದ ಇಬ್ಬರೂ ಆರೋಪಿಗಳು ಮಾಧ್ಯಮದವರನ್ನು ಕಂಡ ತಕ್ಷಣ ತಮ್ಮ ಬ್ಯಾಗುಗಳನ್ನು ಮುಖಕ್ಕೆ ಮುಚ್ಚಿಕೊಂಡು ಒಳಗೆ ಹೋಗಿದ್ದಾರೆ.
ಖೋದಾನಪುರ ರೈತ ರಾಜೇಂದ್ರ ಇನಾಮದಾರ ಅವರ ಜಮೀನು ಖಾತೆ ಮಾಡಲು ಆರೋಪಿಗಳು 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಶುಕ್ರವಾರ ರಾತ್ರಿ 2 ಲಕ್ಷ ರೂ. ಲಂಚ ತೆಗೆದುಕೊಳ್ಳುವ ವೇಳೆ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಪೊಲೀಸರು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಇಬ್ಬರೂ ಆರೋಪಿಗಳನ್ನು ಸೋಮವಾರರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


