ಬೆಂಗಳೂರು : ಗಡಿ ವಿವಾದದ ಸಂಬಂಧ ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳ ಪುಂಡಾಟ ಮುಂದುವರೆದಿದ್ದು, ಮುಂಬೈನ ಮಾಹಿಮ್ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪೋಸ್ಟರ್‌ಗೆ ಕಪ್ಪು ಮಸಿ ಬಳಿಯಲಾಗಿದೆ.
ಕರ್ನಾಟಕದ ಪ್ರವಾಸೋದ್ಯಮದ ಜಾಹೀರಾತು ಇದ್ದ ಪೋಸ್ಟರ್‌ನಲ್ಲಿನ ಮುಖ್ಯಮಂತ್ರಿ ಬೊಮ್ಮಾಯಿ, ಸಚಿವ ಆನಂದ್ ಸಿಂಗ್ ಅವರ ಚಿತ್ರಕ್ಕೆ ಕಪ್ಪು ಬಣ್ಣ ಬಳಿಯಲಾಗಿದೆ.
ಇತ್ತ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿನ್ನೆ ಸಂಜೆ ಮಹತ್ವದ ಸಭೆ ನಡೆದಿದ್ದು, ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ನೇಮಕವಾದ ಬಳಿಕ ಮೊದಲ ಸಭೆ ಮಾಡಿದ್ದೇವೆ.
ಗಡಿ ವಿವಾದದ ಬಗ್ಗೆ ಇಲ್ಲಿಯವರೆಗೆ ನಡೆದಿರುವುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಸುಪ್ರೀಂ ಕೋರ್ಟ್ನಲ್ಲಿ ಯಾವ ರೀತಿ ವಾದ ಮಾಡಬೇಕು ಎಂದು ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


