ತಾಯಿ ಮತ್ತು ಮಗ ಸೇರಿ ತಂದೆಯನ್ನು ಕೊಂದು ಶವವನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಇಬ್ಬರೂ ಬೇರೆ ಬೇರೆ ದಿನಗಳಲ್ಲಿ ಬಂದು ಮಧ್ಯರಾತ್ರಿಯಲ್ಲಿ ಮೃತದೇಹದ ಭಾಗಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿರುವ ಭಯಾನಕ ಪ್ರಕರಣವೊಂದು ಬಯಲಾಗಿದೆ.
ಪೂರ್ವ ದೆಹಲಿಯಲ್ಲಿ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಪೊಲೀಸರು ಪತ್ತೆ ಹಚ್ಚಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳಾದ ದೆಹಲಿಯ ಪಾಂಡವನಗರದ ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ.
ತಂದೆಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿತ್ತು ಎಂದು ತನಿಖೆಯ ವರದಿ ತಿಳಿಸಿದೆ. ಅದಕ್ಕಾಗಿಯೇ ಮಗ ತಾಯಿಯೊಂದಿಗೆ ಸೇರಿ ಈ ಕೃತ್ಯವನ್ನು ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಹೆಸರು ಪೂನಂ ಮತ್ತು ಮಗನ ಹೆಸರು ದೀಪಕ್. ಮೃತರ ಹೆಸರು ಅಂಜನ್ ದಾಸ್ ಎಂದು ತಿಳಿದು ಬಂದಿದೆ.
ತಾಯಿ ಮತ್ತು ಮಗ ಇಬ್ಬರೂ ಅಂಜನ್ ದಾಸ್‌ಗೆ ಅಮಲು ಮಾತ್ರೆಗಳನ್ನು ತಿನ್ನಿಸಿ ಕೊಂದಿದ್ದಾರೆ. ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ್ದರು. ಯಾರಿಗೂ ಅನುಮಾನ ಬರದಂತೆ ಬೇರೆ ಬೇರೆ ದಿನಗಳಲ್ಲಿ ಮಧ್ಯರಾತ್ರಿಯಲ್ಲಿ ಮೃತ ದೇಹಗಳ ತುಂಡುಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


